ಅಭಿಪ್ರಾಯ / ಸಲಹೆಗಳು

ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ

ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ
 (2021-22ನೇ ಸಾಲಿನ ಆಯವ್ಯಯ ರೂ.13335.00 ಲಕ್ಷ)

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2438 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು ಇವುಗಳಲ್ಲಿ 1463 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲಾಗಿದ್ದು 105 ವಿದ್ಯಾರ್ಥಿನಿಲಯಗಳು ಉಚಿತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 870 ವಿದ್ಯಾರ್ಥಿನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿನ ನಿಲಯಾರ್ಥಿಗಳಿಗೆ ಅಗತ್ಯವಾದ ಸ್ಥಳಾವಕಾಶ, ಶೌಚಾಲಯ, ಸ್ನಾನಗೃಹದಂತಹ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯಂತ ಅವಶ್ಯಕವಾಗಿರುತ್ತದೆ.

ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಆಯವ್ಯಯದ ಲಭ್ಯತೆಯನುಸಾರ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು ಪ್ರಸ್ತುತ 198 ವಿದ್ಯಾರ್ಥಿನಿಲಯಗಳ ಕಟ್ಟಡಗಳ ನಿರ್ಮಾಣ ಕಾರ್ಯವು ವಿವಿಧ ಹಂತದಲ್ಲಿರುತ್ತವೆ.

2021-22 ನೇ ಸಾಲಿನಲ್ಲಿ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ವಿವಿಧ ಯೋಜನೆಗಳಡಿ ರೂ.13335.00 ಲಕ್ಷ ಹಣಾವಕಾಶವನ್ನು ಒದಗಿಸಲಾಗಿದೆ.

ಪ್ರಸ್ತುತ ಒಟ್ಟು 664 ನಿವೇಶನಗಳು ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕೆ ಲಭ್ಯವಿರುತ್ತವೆ.

ಇತ್ತೀಚಿನ ನವೀಕರಣ​ : 21-04-2021 03:53 PM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080