ಅಭಿಪ್ರಾಯ / ಸಲಹೆಗಳು

ಸರ್ಕಾರಿ ಆಶ್ರಮ ಶಾಲೆಗಳ ನಿರ್ವಹಣೆ

ಸರ್ಕಾರಿ ಆಶ್ರಮ ಶಾಲೆಗಳ ನಿರ್ವಹಣೆ

(ಲೆಕ್ಕಶೀರ್ಷಿಕೆ ಜಿಲ್ಲಾವಲಯ ಯೋಜನೇತರ 2225-00-103-0-41)
(2020-21ನೇ ಸಾಲಿನ ಆಯವ್ಯಯ: ರೂ.348.13 ಲಕ್ಷಗಳು)

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ
ಆಶ್ರಮಶಾಲೆಗಳನ್ನು ನಿರ್ವಹಿಸಲಾಗುತ್ತಿದೆ. ಈ ಆಶ್ರಮ ಶಾಲೆಗಳಲ್ಲಿ 1ರಿಂದ 4ನೇ ತರಗತಿಯವರೆಗೆ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಕ್ಷಣದ ಜೊತೆಗೆ
ಊಟ ಮತ್ತು ವಸತಿ ಸೌಲಭ್ಯವನ್ನು ಕೆಳಕಂಡಂತೆ ಒದಗಿಸಲಾಗುತ್ತಿದೆ.
1.ಪ್ರತಿ ವಿದ್ಯಾರ್ಥಿಗೆ ಮಾಹೆಯಾನ ರೂ. 1100/- ರ ವೆಚ್ಚದಲ್ಲಿ 10 ತಿಂಗಳ ಅವಧಿಗೆ ಆಹಾರ ನೀಡಿಕೆ.
2.ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ 2 ಜೊತೆ ಸಮವಸ್ತ್ರ ಪೂರೈಕೆ.
3.ಪ್ರತಿ ವಿದ್ಯಾರ್ಥಿಗೆ ರೂ.50/- ರ ವೆಚ್ಚದಲ್ಲಿ ವರ್ಷಕ್ಕೆ ಪಠ್ಯ ಪುಸ್ತಕ ಮತ್ತು ಸ್ಲೇಟ್ ಗಳ ಪೂರೈಕೆ.
4.ಪ್ರತಿ ವಿದ್ಯಾರ್ಥಿಗೆ ಮಾಹೆಯಾನ ರೂ.20/- ರಂತೆ 10 ತಿಂಗಳ ಅವಧಿಗೆ ಇತರೆ ವೆಚ್ಚಗಳಲ್ಲಿ ಸೋಪು, ಎಣ್ಣೆ ಇತ್ಯಾದಿ.
5.ಪ್ರತಿ ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ಹಾಸಿಗೆ ಹೊದಿಕೆ ಸರಬರಾಜು.
6.ಮಂಜೂರಾತಿ ಸಂಖ್ಯೆ 50 ಇರುವ ಆಶ್ರಮ ಶಾಲೆಗೆ ವರ್ಷಕ್ಕೆ ರೂ.200/- ರಂತೆ ಹಾಗೂ ಮಂಜೂರಾತಿ ಸಂಖ್ಯೆ 50
ಕ್ಕಿಂತ ಹೆಚ್ಚಿಗೆ ಇರುವ ಆಶ್ರಮ ಶಾಲೆಗೆ ರೂ.400/- ರಂತೆ ಪಾತ್ರೆಗಳ ಕಲಾಯಿ ವೆಚ್ಚ.
7.ಪ್ರತಿ ಬಾಲಕ ವಿದ್ಯಾರ್ಥಿಗೆ ವಾರ್ಷಿಕ ರೂ.300/-ರಂತೆ ತಲೆ ಕ್ಷೌರದ ವೆಚ್ಚ.
ಆಶ್ರಮಶಾಲೆಗಳ ಪ್ರವೇಶಕ್ಕಾಗಿ ಅನುಸರಿಸುವ ಮಾನದಂಡಗಳ ವಿವರ
1.ವಿದ್ಯಾರ್ಥಿಗಳನ್ನು ಪ್ರವೇಶಕ್ಕೆ ಆಯ್ಕೆ ಮಾಡುವಾಗ ಮಂಜೂರಾತಿ ಸಂಖ್ಯೆಯ ಶೇಕಡ 75 ರಷ್ಟನ್ನು ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳನ್ನು
ಹಾಗೂ ಶೇಕಡ 25 ರಷ್ಟನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಬೇಕು.
2.ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ದೊರೆಯದಿದ್ದಲ್ಲಿ, ಮೀಸಲಾತಿ ಪ್ರಮಾಣವು ಈ ಕೆಳಕಂಡಂತಿರಬೇಕು.
1 ಪ್ರವರ್ಗ - 2ಎ ಶೇಕಡ 54
2 ಪ್ರವರ್ಗ - 2ಬಿ ಶೇಕಡ 14
3 ಪ್ರವರ್ಗ - 3ಎ ಶೇಕಡ 14
4 ಪ್ರವರ್ಗ - 3ಬಿ ಶೇಕಡ 18
  ಒಟ್ಟು ಶೇಕಡ 100
3.ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ವಿದ್ಯಾರ್ಥಿಗಳಿಗೆ ರೂ.44,500/- ಗಳ
ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಆಶ್ರಮ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸರ್ಕಾರಿ ಆದೇಶ ಸಂಖ್ಯೆ ಸಕಇ 221 ಬಿಎಂಎಸ್ 2009 ದಿ:24.07.2009 ರಲ್ಲಿ
ರಚಿಸಿರುವ ಈ ಕೆಳಕಂಡ ತಾಲ್ಲೂಕು ಮಟ್ಟದ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.
1 ತಾಲ್ಲೂಕಿನ ಹೆಚ್ಚಿನ ಭಾಗ ಪ್ರತಿನಿಧಿಸುವ ವಿಧಾನಸಭಾ ಸದಸ್ಯರು ಅಧ್ಯಕ್ಷರು
2 ತಾಲ್ಲೂಕಿನ ಉಳಿದ ಭಾಗ ಪ್ರತಿನಿಧಿಸುವ ವಿಧಾನಸಭಾ ಸದಸ್ಯರು ಸದಸ್ಯರು
3 ಆಯಾ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರು ಸದಸ್ಯರು
4 ಸಂಬಂಧಪಟ್ಟ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸದಸ್ಯರು
5 ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ) ಸದಸ್ಯರು
6 ಆಯಾ ತಾಲ್ಲೂಕಿನ ತಹಶೀಲ್ದಾರರು ಸದಸ್ಯರು
7 ಆಯಾ ತಾಲ್ಲೂಕಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸದಸ್ಯರು
8 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ವಿಸ್ತರಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ

ಇತ್ತೀಚಿನ ನವೀಕರಣ​ : 01-02-2021 06:41 PM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080