ಅಭಿಪ್ರಾಯ / ಸಲಹೆಗಳು

ಪಿ ಹೆಚ್ ಡಿ ಪೂರ್ಣಾವಧಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಫೆಲೋಶಿಪ್

ಪಿ.ಹೆಚ್.ಡಿ ಪೂರ್ಣಾವಧಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಫೆಲೋಶಿಪ್
ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಡಿ.ದೇವರಾಜ ಅರಸುರವರ ಜನ್ಮ ಶತಮಾನೋತ್ಸವದ ಅಂಗವಾಗಿ
2015-16ನೇ ಸಾಲಿನಿಂದ ಮಾಸಿಕ ರೂ.5,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಿ, ಉನ್ನತ ಶಿಕ್ಷಣ/ಸಂಶೋಧನೆಯಲ್ಲಿ ತೊಡಗಿಕೊಳ್ಳಲು
ನೆರವು ನೀಡಲಾಗುತ್ತಿದೆ. 2018-19 ನೇ ಸಾಲಿನಿಂದ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಮಾಸಿಕ ರೂ.5000/- ದಿಂದ ರೂ.10,000/- ಕ್ಕೆ ಹೆಚ್ಚಿಸಿ ಆದೇಶಿಸಿದೆ.
ಅ) ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ನ ಮೊತ್ತ ಮತ್ತು ಅವಧಿ
1.ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ.10,000/- ದಂತೆ ಗರಿಷ್ಠ 3 ವರ್ಷಗಳ ಅವಧಿಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಅಭ್ಯರ್ಥಿಯ
ಬ್ಯಾಂಕ್ ಖಾತೆಗೆ ಜಮಾ ಮಾಡುವುದು.
2.ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಗೆ ಒದಗಿಸತಕ್ಕದ್ದಲ್ಲ.
ಆ) ಅಭ್ಯರ್ಥಿಗೆ ನಿಗದಿಪಡಿಸಿರುವ ಅರ್ಹತೆಗಳು
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2.ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
3.ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪೂರ್ಣಾವಧಿ (Full Time) ಪಿಎಚ್.ಡಿ
ಅಧ್ಯಯನದಲ್ಲಿ ತೊಡಗಿರಬೇಕು.
4.ಈ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಯು ಭಾರತ ಸರ್ಕಾರ / ಕರ್ನಾಟಕ ಸರ್ಕಾರ / ವಿಶ್ವವಿದ್ಯಾಲಯ
ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗೆ ಆಯ್ಕೆಯಾಗಿರಬಾರದು.
ಇ) ಶೈಕ್ಷಣಿಕ ಅರ್ಹತೆ
1.ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
2.ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ
ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
3.ಈ ನೋಂದಣಿಯು ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಹಿಂದಿನ 2 ವರ್ಷಗಳೊಳಗಿದ್ದು,
ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
4.ಈ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಯು ಭಾರತ ಸರ್ಕಾರ / ಕರ್ನಾಟಕ ಸರ್ಕಾರ / ವಿಶ್ವವಿದ್ಯಾಲಯ
ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗೆ ಆಯ್ಕೆಯಾಗಿರಬಾರದು.
ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು.
ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಪ್ರವರ್ಗ-1 - ರೂ.4.50 ಲಕ್ಷ.
ಪ್ರವರ್ಗ-2(ಎ), 3(ಎ) ಮತ್ತು 3(ಬಿ) - ರೂ.3.50 ಲಕ್ಷ.
1.ಕೇಂದ್ರ / ರಾಜ್ಯ ಸರ್ಕಾರಿ / ಅನುದಾನಿತ ಸಂಸ್ಥೆ / ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ
ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.
2.ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
3.ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಪಿಎಚ್.ಡಿ ಅಧ್ಯಯನಕ್ಕಾಗಿ ಈ ಸೌಲಭ್ಯವನ್ನು ಒದಗಿಸುವುದು.

 

ಇತ್ತೀಚಿನ ನವೀಕರಣ​ : 30-08-2021 03:46 PM ಅನುಮೋದಕರು: BCWD ADMIN



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080