ಅಭಿಪ್ರಾಯ / ಸಲಹೆಗಳು

ಆಶ್ರಮ ಶಾಲೆಗಳ ಪ್ರಾರಂಭ ಹಾಗೂ ನಿರ್ಹವಣೆ

ಆಶ್ರಮ ಶಾಲೆಗಳ ಪ್ರಾರಂಭ ಹಾಗೂ ನಿರ್ಹವಣೆ
ಯೋಜನೆಯ ಉದ್ದೇಶ:

ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದವರ ಕುಟುಂಬಕ್ಕೆ ಸೇರಿದ ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ನೆರವು ಹಾಗೂ ಉತ್ತೇಜನ ನೀಡುವ ದೃಷ್ಠಿಯಿಂದ 125 ಸಂಖ್ಯಾಬಲದ 4 ಆಶ್ರಮ ಶಾಲೆಗಳನ್ನು ಕೊಪ್ಪಳ, ಕಲಬುರಗಿ, ಚಿಕ್ಕಮಗಳೂರು ಮತ್ತು ಬೆಳಗಾಂ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ. ಈ ಆಶ್ರಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ಊಟ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಿ, ಹತ್ತಿರದಲ್ಲಿ ಸರ್ಕಾರಿ ಶಾಲೆ ಇಲ್ಲದೇ ಇದ್ದಲ್ಲಿ, ಶೈಕ್ಷಣಿಕ ಸೌಲಭ್ಯವನ್ನು ಕೂಡಾ ಒದಗಿಸಲಾಗುವುದು.

ಅರ್ಹತೆ:

1. ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಗಳಿಗೆ ಸೇರಿರಬೇಕು. (ಹಾಲಿ ಚಾಲ್ತಿಯಲ್ಲಿರುವ ಹಿಂದುಳಿದ ವರ್ಗಗಳ ಪಟ್ಟಿಯಪ್ರವರ್ಗ-1ರಲ್ಲಿ ಸೇರಿಸಲ್ಪಟ್ಟಿರಬೇಕು ಹಾಗೂ ದಿನಾಂಕ:01-02-1966ರ ಆದೇಶದಲ್ಲಿ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಗಳೆಂದು ಗುರ್ತಿಸಲ್ಪಟ್ಟಿರಬೇಕು)

2. 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯಸ್ಸು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾರ್ಥಮಿಕ ಶಾಲೆ ಪ್ರವೇಶಕ್ಕೆ ನಿಗದಿಪಡಿಸಿರುವ ಕನಿಷ್ಠ ವಯೋಮಿತಿ ಉಳ್ಳವರಾಗಿರತಕ್ಕದ್ದು.

ಸೌಲಭ್ಯಗಳು:

1. ಸರ್ಕಾರವು ಕಾಲಕಾಲಕ್ಕೆ ನಿಗದಿಪಡಸಿರುವ ದರದಲ್ಲಿ ಆಹಾರ, ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಗ್ರಿಗಳು, ಸೋಪು, ಟೂತ್ ಪೇಸ್ಟ್, ಕೊಬ್ಬರಿ ಎಣ್ಣೆ ಪೂರೈಕೆ ಮಾಡಲಾಗುವುದು. 2. ಮೂರು ವರ್ಷಕ್ಕೊಮ್ಮೆ ಹಾಸಿಗೆ, ಹೊದಿಕೆ ಸರಬರಾಜು.

3. ವಿದ್ಯಾರ್ಥಿಗಳಿಗೆ ಕ್ಷೌರ ವ್ಯವಸ್ಥೆ.

4. ದಿನಪತ್ರಿಕೆ ಪೂರೈಕೆ.

5. ವೈದ್ಯಕೀಯ ಸೌಲಭ್ಯ.

ಇತ್ತೀಚಿನ ನವೀಕರಣ​ : 09-09-2020 03:08 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080