ಅಭಿಪ್ರಾಯ / ಸಲಹೆಗಳು

ವಸತಿ ಯೋಜನೆ

ವಸತಿ ಯೋಜನೆ
ಯೋಜನೆಯ ಉದ್ದೇಶ:

ಅಲೆಮಾರಿ/ಅರೆಅಲೆಮಾರಿ ಜನಾಂಗದ ವಸತಿರಹಿತರಿಗೆ ಅತಿ ಅಗತ್ಯ ಮೂಲಭೂತ ಸೌಕರ್ಯವಾದ ವಸತಿ ಸೌಲಭ್ಯವನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.ನಿರ್ದಿಷ್ಟ ನೆಲೆ ಇಲ್ಲದೆ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಜನಾಂಗವು ಅತ್ಯಂತ ಹಿಂದುಳಿದಿದೆ.ವಸತಿ ಸೌಲಭ್ಯವನ್ನು ಕಲ್ಪಿಸಿ, ಒಂದು ಸ್ಥಳದಲ್ಲಿ ನೆಲೆ ನಿಲ್ಲಲು ಅವಕಾಶವನ್ನು ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ.

ವಸತಿ ಯೋಜನೆಯ ಅನುಷ್ಠಾನ:
ಈ ಯೋಜನೆಯನ್ನು ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮದ ಮೂಲಕಅನುಷ್ಠಾನ ಮಾಡಲಾಗುತ್ತಿದೆ.
ಘಟಕ ವೆಚ್ಚ:
ಹಾಲಿ ಪ್ರತಿ ಮನೆಗೆ ರೂ. 1,20,000/- ದಂತೆ ಸಹಾಯಧನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿದೆ.
ನಿಬಂಧನೆಗಳು:

1 ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಹಿಂದುಳಿದ ವರ್ಗಗಳಅಲೆಮಾರಿ/ಅರೆಅಲೆಮಾರಿ ಜನಾಂಗದ ಎಲ್ಲಾ ಜಾತಿಗಳಿಗೂ ಪ್ರಾತಿನಿಧ್ಯತೆಯನ್ನು ನೀಡುವುದು. (ಹಾಲಿ ಚಾಲ್ತಿಯಲ್ಲಿರುವ ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-1ರಲ್ಲಿ ಸೇರಿಸಲ್ಪಟ್ಟಿರಬೇಕು ಹಾಗೂ ದಿನಾಂಕ: 01-02-1966ರ ಆದೇಶದಲ್ಲಿ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಗಳೆಂದು ಗುರ್ತಿಸಲ್ಪಟ್ಟಿರಬೇಕು)

2 ಫಲಾನುಭವಿಯು ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ವಸತಿ ಸೌಲಭ್ಯವನ್ನು ಪಡೆದಿರಬಾರದು.

3 ಕನಿಷ್ಠ 20 ವರ್ಷದವರೆಗೆ ಈ ನಿವೇಶವನ್ನು ಪರಭಾರೆ ಪಡೆತಕ್ಕದ್ದಲ್ಲ. ಈ ಅವಧಿಯಲ್ಲಿ ಪರಭಾರೆ ಮಾಡಿದ್ದಲ್ಲಿ, ಮಾರಾಟ ಮಾಡುವಾಗ ಇದ್ದ ಮಾರುಕಟ್ಟೆ ಬೆಲೆಯನ್ನು ಸರ್ಕಾರಕ್ಕೆ ಪಾವತಿ ಮಾಡಬೇಕು.

4 ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಕುಟುಂಬದ ಮಹಿಳೆಯರ/ಪುರುಷರ ಹೆಸರಿನಲ್ಲಿ ನೊಂದಣಿಯಾಗಿರಬೇಕು.

5 ರಾಜೀವ ಗಾಂಧಿ ವಸತಿ ನಿಗಮದ ಮೂಲಕ ಅನುಷ್ಠಾನವಾಗುವ ಎಲ್ಲಾ ವಸತಿ ಯೋಜನೆಗಳ ನಿಯಮಗಳು ಈ ಯೋಜನೆಗೂ ಅನ್ವಯವಾಗುತ್ತದೆ.

6 ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.2.00 ಲಕ್ಷದ ಮಿತಿಯೊಳಗೆ ಇರಬೇಕು.

ಇತ್ತೀಚಿನ ನವೀಕರಣ​ : 09-09-2020 03:18 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080