ಅಭಿಪ್ರಾಯ / ಸಲಹೆಗಳು

ನಿವೇಶನ ರಹಿತರಿಗೆ ವಸತಿ ನಿವೇಶನ ಒದಗಿಸಲು ಜಮೀನು ಖರೀದಿ

ನಿವೇಶನ ರಹಿತರಿಗೆ ವಸತಿ ನಿವೇಶನ ಒದಗಿಸಲು ಜಮೀನು ಖರೀದಿ
ಯೋಜನೆಯ ಉದ್ದೇಶ:

ಅಲೆಮಾರಿ/ಅರೆಅಲೆಮಾರಿ ಜನಾಂಗದ ಹೆಚ್ಚಿನ ಕುಟುಂಬಗಳಿಗೆ ನಿವೇಶನವಿಲ್ಲದೆ ಇರುವುದರಿಂದ ನಿವೇಶನವನ್ನು ಒದಗಿಸಿ ವಸತಿ ಸೌಲಭ್ಯವನ್ನು ಕಲ್ಪಿಸುವುದು ಅಗತ್ಯವಾಗಿದೆ. ಇದಕ್ಕಾಗಿ ಸರ್ಕಾರಿ ಜಮೀನನ್ನು ಗುರುತಿಸಿ ನಿವೇಶನವನ್ನು ಹಂಚಲು ಜಿಲ್ಲಾಧಿಕಾರಿಗಳ ಹಂತದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರಿ ಜಮೀನು ಲಭ್ಯವಾಗದೇ ಇರುವ ಕಡೆ ಖಾಸಗಿ ಜಮೀನನ್ನು ಖರೀದಿಸಿ ನಿವೇಶನ ಹಂಚಿಕೆಯನ್ನು ಮಾಡಬೇಕಾಗಿರುತ್ತದೆ

ಸರ್ಕಾರದ ಆದೇಶ ಸಂಖ್ಯೆ. ಬಿಸಿಡಬ್ಲ್ಯೂ 993 ಬಿಎಂಎಸ್ 2014, ದಿನಾಂಕ: 24.02.2015ರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಮೀನು ಖರೀದಿ ಸಮಿತಿಯನ್ನು ರಚಿಸಲಾಗಿರುತ್ತದೆ.

  1. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಆಸಕ್ತ ಮಾರಾಟಗಾರರಿಂದ ಜಮೀನಿನ ದಾಖಲೆಗಳು, ದರದ ವಿವರ ಹಾಗೂ ಮಾರಾಟ ಮಾಡಲು ಒಪ್ಪಿರುವ ಬಗ್ಗೆ ಒಪ್ಪಿಗೆ ಪತ್ರವನ್ನು ಪಡೆಯಬೇಕು.
  2. ಖರೀದಿಗೆ ಪ್ರಸ್ತಾಪಿಸುವ ಜಮೀನು ಯಾವುದೇ ಋಣಭಾರದಿಂದ ಮುಕ್ತವಾಗಿರತಕ್ಕದ್ದು.
  3. ಜಿಲ್ಲಾಧಿಕಾರಿಯ ಅಧ್ಯಕ್ಷತೆಯ ಜಮೀನು ಖರೀದಿ ಸಮಿತಿಯ ಸಭೆಯಲ್ಲಿ ಜಮೀನಿನ ದಾಖಲೆಗಳನ್ನು ಹಾಗೂ ದರವನ್ನು ಪರಿಶೀಲಿಸಿ, ಖರೀದಿಸಬಹುದಾದ ದರವನ್ನು ನಿರ್ಣಯಿಸಿ ಪ್ರಸ್ತಾವನೆಯನ್ನು ನಡವಳಿಯೊಂದಿಗೆ, ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. 3. ನಿಯಮಾನುಸಾರ ಪರಿಶೀಲಿಸಿ ಅನುದಾನ ಬಿಡುಗಡೆಗೆ ಸರ್ಕಾರದಿಂದಕ್ರಮ ಕೈಗೊಳ್ಳಲಾಗುವುದು.
  4. ನಿಯಮಾನುಸಾರ ಪರಿಶೀಲಿಸಿ ಅನುದಾನ ಬಿಡುಗಡೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು.
ಅರ್ಹತೆಗಳು:

1 ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಅಲೆಮಾರಿ/ ಅರೆಅಲೆಮಾರಿ ಜನಾಂಗದ ಎಲ್ಲಾ ಜಾತಿಗಳಿಗೂ ಪ್ರಾತಿನಿಧ್ಯತೆಯನ್ನು ನೀಡುವುದು.

2 ಫಲಾನುಭವಿಗಳು ನಿವೇಶನ ರಹಿತರಾಗಿರಬೇಕು ಹಾಗೂ ಫಲಾನುಭವಿಯ ಹೆಸರಿನಲ್ಲಿ ಯಾವುದೇ ನಿವೇಶನ/ ಜಮೀನು ಇರತಕ್ಕದ್ದಲ್ಲ.

3 ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.2.00 ಲಕ್ಷಗಳ ಒಳಗಿರಬೇಕು.

ಇತ್ತೀಚಿನ ನವೀಕರಣ​ : 09-09-2020 03:24 PM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080