ಅಭಿಪ್ರಾಯ / ಸಲಹೆಗಳು

ಮೆಟ್ರಿಕ್-ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ

ಮೆಟ್ರಿಕ್-ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ
ಯೋಜನೆ ಉದ್ದೇಶ ಮತ್ತು ಪ್ರೋತ್ಸಾಹಧನ ದರಗಳು:
ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಅವರಲ್ಲಿ ಮಧ್ಯದಲ್ಲಿ ಶಾಲೆ ಬಿಡುವವರ ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ಈ ಹಂತದ ಶಿಕ್ಷಣ ಮುಂದುವರಿಕೆಯ ಉದ್ದೇಶದಿಂದ, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಈ ಕೆಳಕಾಣಿಸಿದ ದರಗಳಲ್ಲಿ ಪ್ರೋತ್ಸಾಹಧನ ಮಂಜೂರು ಮಾಡಲು ಈ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ
ಕ್ರ.ಸಂ ತರಗತಿ
ಮಾಹೆಯಾನ ಪ್ರೋತ್ಸಾಹಧನ ದರಗಳು
ಬಾಲಕ ಬಾಲಕಿಯರು
ಅವಧಿ ಒಟ್ಟು ಮೊತ್ತ (ರೂ.ಗಳಲ್ಲಿ)
1 1 ರಿಂದ 10ನೇ ತರಗತಿ
ರೂ.200/- ರೂ.200/-
10 ತಿಂಗಳು 2000/-
ಅರ್ಹತೆ:

1. ಹಿಂದುಳಿದವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿ ಆಗಿರಬೇಕು.

2. ವಿದ್ಯಾರ್ಥಿಯ, ಅವರ ತಂದೆ-ತಾಯಿ ಪಾಲಕರು/ಪೋಷಕರ ವಾರ್ಷಿಕ ಆದಾಯ ರೂ.2.00 ಲಕ್ಷ ಮಿತಿಯೊಳಗಿರಬೇಕು.

3. ವಿದ್ಯಾರ್ಥಿಯು, 1 ರಿಂದ 10ನೇ ತರಗತಿಯವರೆಗೆ, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

4. ಈ ಯೋಜನೆಯಡಿ ಹೊಸದಾಗಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿ ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

5. ವಿದ್ಯಾರ್ಥಿಯು ಸರ್ಕಾರದ ಇನ್ನಾವುದೇ ಯೋಜನೆಯಿಂದ ವಿದ್ಯಾರ್ಥಿವೇತನ ಅಥವಾ ವಸತಿನಿಲಯ ಸೌಲಭ್ಯವನ್ನು ಪಡೆದಿರಬಾರದು.

6. ಈ ಪ್ರೋತ್ಸಾಹಧನವನ್ನು ನವೀಕರಿಸಲು ವಿದ್ಯಾರ್ಥಿಯು ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.

ಮಂಜೂರಾತಿ ವಿಧಾನ:

1.ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಪರಿಶೀಲನೆ ನಂತರ ಅರ್ಹ ವಿದ್ಯಾರ್ಥಿಗಳಿಗೆ ಮಂಜೂರಾತಿ ನೀಡಲಾಗುವುದು.

2. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನ ಮೊತ್ತವನ್ನು ಜಮಾ ಮಾಡಲಾಗುವುದು.

ಇತ್ತೀಚಿನ ನವೀಕರಣ​ : 08-04-2021 11:49 AM ಅನುಮೋದಕರು: BCWD ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080